ಮೈಸೂರು : ರಾಜ್ಯದಲ್ಲಿ ಹಿಂದ ಹೋರಾಟದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಇದೀಗ ಈ ವಿಚಾರದ ಬಗ್ಗೆ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದ ಹೋರಾಟದ ಚರ್ಚೆ ಅಪ್ರಸ್ತುತ. ಹಿಂದ ಕೂಗು ಎತ್ತಿದವರು ಮೂಲೆ ಗುಂಪಾಗಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹಿಂದ ಜಪ ಮಾಡುತ್ತಿದ್ದಾರೆ ಎಂದು ಮಹದೇವಪ್ಪ ಅವರಿಗೆ ಸೋಮಶೇಖರ್ ಟಾಂಗ್ ನೀಡಿದ್ದಾರೆ.