ಜೆಡಿಎಸ್, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ಹಣದ ಆಮಿಷ ಒಡ್ಡಿ ಗಾಳ ಹಾಕುತ್ತಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪನವರ ಆಡಿಯೋವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಲಂಚ ಕೇಳುವ ವಿಡಿಯೋ ನಮ್ಮಲ್ಲಿದೆ ಎಂದು ಶಾಸಕರೊಬ್ಬರು ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯರಾಗಲು ಒಬ್ಬರಿಗೆ 25 ಕೋಟಿ ರೂ. ಲಂಚ ಕೇಳುವ ಧ್ವನಿ ಮತ್ತು ದೃಶ್ಯ ಸುರಳಿ ನಮ್ಮಲ್ಲಿದೆ. ಹೀಗಂತ ಬಿಜೆಪಿ ಮುಖಂಡ ಹೇಳಿಕೊಂಡಿದ್ದಾರೆ.
ಸಿಎಂ ಲಂಚ ಕೇಳಿರುವ ವಿಡಿಯೋವನ್ನು ಸೋಮವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಸೋಮವಾರ ಸದನದಲ್ಲಿ ಈ ಧ್ವನಿ ಸುರುಳಿಯ ಬಗ್ಗೆ ಪ್ರಸ್ತಾಪಿಸಿ ಅದನ್ನು ಸಭಾಧ್ಯಕ್ಷರಿಗ ತಲುಪಿಸಿ, ಈ ಧ್ವನಿ ಸುರಳಿಯ ಸತ್ಯಾಸತ್ಯತೆಯನ್ನು ಅರಿಯಲು ಸಭಾಧ್ಯಕ್ಷರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ತಮ್ಮ ಕೊಠಡಿಗೆ ಕರೆಸಿ ವಿಚಾರಣೆ ಮಾಡುವಂತೆಯೂ ಬಿಜೆಪಿ ನಾಯಕರು ಸದನದಲ್ಲಿ ಮನವಿ ಮಾಡುವರು ಎಂದು ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಕೀಳುಮಟ್ಟದಲ್ಲಿ ಪಾಲ್ಗೊಂಡಿರುವುದು ಇದೇ ಮೊದಲೇನೂ ಅಲ್ಲ ಎಂದು ಅವರು ದೂರಿದ್ದಾರೆ.