ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಷಿ ಭವಿಷ್ಯ ನುಡಿದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳು ಉತ್ತಮ ಅಡಳಿತ ರಾಜ್ಯದ ಜನತೆಯನ್ನು ಆಕರ್ಷಿಸಿವೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಮತದಾರರು ಮೋದಿ ಪರವಾಗಿ ಮತಚಲಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಅತಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ಬಿಬಿಎಂಪಿ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಸರಕಾರ ಜನವಿರೋಧಿ ಸರಕಾರವಾಗಿದೆ. ಕೇಂದ್ರ ಸರಕಾರದಿಂದ ಬಂದ ಅನುದಾನವನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ. ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡುವುದೇ ಕಾಂಗ್ರೆಸ್ ನಾಯಕರ ಕಾಯಕವಾಗಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.