Publish Date: Sat, 26 Oct 2019 (18:16 IST)
Updated Date: Sat, 26 Oct 2019 (18:19 IST)
ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಉಮೇಶ ಕತ್ತಿ ಮತ್ತೆ ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಏಕಾಂಗಿಯಾಗಿ ಕುಳಿತು ತಮ್ಮ ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.
ಮುಂಬರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಉಮೇಶ ಕತ್ತಿ, ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ನಾಯಕರ ಮೇಲೆ ಮುನಿಸಿಕೊಂಡಿದ್ದರು. ಆ ಸಿಟ್ಟನ್ನು ಮತ್ತೆ ಬಿಎಸ್ ವೈ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಏಕಾಂಗಿಯಾಗಿ ಸಭೆಕೊನೆಯ ಸಾಲಿನಲ್ಲಿ ಕೈ ಕಟ್ಟಿಕೊಂಡು ಕುಳಿತುಕೊಳ್ಳುವ ಮೂಲಕ ಮತ್ತೊಮ್ಮೆ ತಮ್ಮ ಪಕ್ಷದ ನಾಯಕರ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ನಂತರ ನಾನೇ ರಾಜ್ಯದ ಸಿಎಂ. ಅದಕ್ಕಾಗಿಯೇ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಶಾಸಕ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.
ಸಚಿವರಾಗಿ ಮುಖ್ಯಮಂತ್ರಿಯಾಗಬೇಕು. ಈಗ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ. ಅವರ ನಂತರ ನಾನೇ ಸಿಎಂ ಆಗುತ್ತೇನೆ ಅಂತ ಕತ್ತಿ ಹೇಳಿದ್ದಾರೆ.
Jagadeesh
Publish Date: Sat, 26 Oct 2019 (18:16 IST)
Updated Date: Sat, 26 Oct 2019 (18:19 IST)