ವ್ಯಕ್ತಿಯೊಬ್ಬರ ಪಾಸ್ ಪೋರ್ಟ್ ಪರಿಶೀಲನೆಗೆ ಲಂಚಕ್ಕೆ ಬೇಡಿಕೆ ಇಟ್ಟು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಪೇದೆಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಲಂಚ ಪಡೆದ ಆರೋಪಿ ಪೇದೆ ಗಿರೀಶ್‍ಗೆ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹರಮಕ್ಕಿಯ ಅಜಿತ್ ಎಂಬುವರಿಗೆ ಪೇದೆ ಗಿರೀಶ್ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಅದರಲ್ಲಿ 2500 ರೂ. ಲಂಚ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು.
ಈ ಕೇಸ್ ತನಿಖೆ ನಡೆಸಿದ ಚಿಕ್ಕಮಗಳೂರು ನಗರದ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಪೇದೆಯ ಆರೋಪ ಸಾಬೀತಾಗಿದ್ದರಿಂದಾಗಿ ಅಪರಾಧಿಯೆಂದು ಪರಿಗಣಿಸಿ ಶಿಕ್ಷೆಯ ತೀರ್ಪು ನೀಡಿದೆ.