ಹಿಂದೂ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕೆಲಸ ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಆಂಜನೇಯ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆ ಹಿಂದಿನ ಸತ್ಯ ತನಿಖೆಯಲ್ಲಿ ಬೆಳಕಿಗೆ ಬರುತ್ತೆ. ಸಾವಿನಲ್ಲಿ ಯಾವುದೇ ರಾಜಕೀಯ ಮಾಡಬಾರದು. ಘಟನೆಯಾದ ಕೆಲವೇ ಗಂಟೆಯಲ್ಲಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಅವರ ಕೆಲಸ ನಿಜಕ್ಕೂ ಶ್ಲಾಘನೀಯವಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ತಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಲಿದೆ ಎಂದಿದ್ದಾರೆ.
ದೀಪಕ್ ಹತ್ಯೆ ನಡೆದ 5 ಗಂಟೆಗಳ ಒಳಗಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ ಕ್ರಮವನ್ನು ಶ್ಲಾಘಿಸಿದ ಸಚಿವರು, 1.20ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ರಾಜಕೀಯ ನಡೆಯ ಬಗ್ಗೆ ಮಾತನಾಡಿ, ಹೊಳಲ್ಕೆರೆ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ನಾನು ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.