Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೊಲೀಸ್‍ರು ಸಂವಿಧಾನದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕೆಂದ ಎಸ್ಪಿ

ಪೊಲೀಸ್‍ರು ಸಂವಿಧಾನದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕೆಂದ ಎಸ್ಪಿ
ಕಲಬುರಗಿ , ಗುರುವಾರ, 9 ಆಗಸ್ಟ್ 2018 (18:34 IST)
ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ಧೈರ್ಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಪೊಲೀಸ್ ಅಧಿಕಾರಿ ಸಲಹೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದರು.

ಪೊಲೀಸ್ ಇಲಾಖೆಯು ಶಿಸ್ತಿಗೆ ಹೆಸರಾದ ಇಲಾಖೆಯಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತುಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೇಮಿಸುವ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್ ಇಲಾಖೆಯ ಒಬ್ಬ ಸಿಬ್ಬಂದಿ ತನ್ನ ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಸ್.ಪಿ., ಎನ್.ಶಶಿಕುಮಾರ ಹೇಳಿದ್ದಾರೆ.






Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರದಿಂದ ಜವಳಿ ಉತ್ಪಾದಕರಿಗೊಂದು ಸಿಹಿಸುದ್ದಿ