Webdunia - Bharat's app for daily news and videos

Install App

ಆಗಸ್ಟ್ 30ರ ವರೆಗೂ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಖಾಸಗಿ ಸಾರಿಗೆ ಒಕ್ಕೂಟ

Webdunia
ಭಾನುವಾರ, 27 ಆಗಸ್ಟ್ 2023 (16:00 IST)
ಶಕ್ತಿ ಯೋಜನೆಯ ಜಾರಿಯಿಂದಾಗಿ ಮಹಿಳೆಯರೇನೋ ಖುಷಿಯಾಗಿದ್ದಾರೆ, ಆದರೆ ಶಕ್ತಿ ಯೋಜನೆ ಜಾರಿ ಜಾರಿ ಯಾದಗಿನಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಎದುರಾದ ಸಂಕಷ್ಟಗಳ ಕುರಿತಂತೆ ಆಗಾಗ್ಗೆ ಆಕ್ರೋಶ ವ್ಯಕ್ತವಾಗುತ್ತಿತ್ತು. ಇದರ ಗಂಭೀರತೆ ಅರಿತ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಟಿಸಿ RTO ಕಚೇರಿಯಲ್ಲಿ ಹಲವು ಸುತ್ತಿನ ಮಾತುಕತೆ ಸಹ ನಡೆಸಿದ್ದರು. ಆದರೆ ಯಾವುದಕ್ಕೂ ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆ ಕಳೆದ ಸೋಮವಾರ ಖಾಸಗಿ ಸಾರಿಗೆ ಸಂಘಟನೆಗಳು ಹಾಗೂ ಸರ್ಕಾರದ ನಡುವಿನ ಜಟಾಪಟಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸೋಮವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಆದರೆ ಈ ಸಭೆಯು ಕೂಡ ವಿಫಲವಾಗಿದ್ದು, ಸರ್ಕಾರ ಸಂಘಟನೆಗಳ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಖಾಸಗಿ ವಾಹನ ಚಾಲಕರ ಸಂಘಟನೆಗಳು ಸರ್ಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸುತ್ತಿವೆ.
 
ಇನ್ನೂ ಸಿಎಂ ಜೊತೆ ನಡೆದ ಸಭೆಯಲ್ಲಿ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗಿ ಆಗಿದ್ದರು, ಆದರೆ ಸಂಬಂಧಪಟ್ಟದ ಸಂಘಟನೆಗಳಿಗೆ ಸಭೆಗೆ ಆಹ್ವಾನಿಸಿಲ್ಲ, ಇವ್ರ್ಯಾರು ಕೂಡ ಖಾಸಗಿ ಚಾಲಕರ ಬಗ್ಗೆ ಧ್ವನಿ ಎತ್ತಿದವರಲ್ಲ ಎಂದು ಕೆಲವು ಸಂಘಟನೆ ಅವರು ಸಭೆಯನ್ನು ಬಹಿಷ್ಕರಿಸಿ ಹೊರಗೆ ಹೋಗಿದ್ದರು,ಇನ್ನೂ ಈ ಬಗ್ಗೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಹಮೀದ್ ಮಾತನಾಡಿ, ಸಾರಿಗೆ ಸಚಿವರ ಆಶ್ವಾಸನೆ ಮೇರೆಗೆ ಬಂದ್ ವಾಪಾಸ್ ಪಡೆದಿದ್ದೆವು. ಆದರೆ ಹೋರಾಟಕ್ಕೆ ಬೆಂಬಲ ಸೂಚಿಸದ ಸಂಘಟನೆಗಳನ್ನು ಸಭೆಗೆ ಕರೆಯಲಾಗಿದೆ. ಸಾರಿಗೆ ಅಡಿಷನಲ್ ಕಮೀಷನರ್, ಹೇಮಂತ್ ಕುಮಾರ್ ಸಂಘಗಳನ್ನು ಒಡೆಯೋ ಕೆಲಸ ಮಾಡುತ್ತಾರೆ. ಸಿಎಂ ಸಭೆಗೆ 32 ಸಂಘಟನೆಗಳು ಬಹಿಷ್ಕರಿಸಿದ್ದೇವೆ. ಸಿಎಂ ಸಭೆಯನ್ನು ತುಚ್ಚವಾಗಿ ನೋಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಇನ್ನೂ 10 ದಿನ ಕಾಲಾವಕಾಶವಿದ್ದು ಅಷ್ಟರೊಳಗೆ ಮತ್ತೆ ಎಲ್ಲಾ ಸಂಘಟನೆಗಳು ಸೇರಿ ಸಭೆ ಕರೆಯಬೇಕು. ಇಲ್ಲದಿದ್ದರೆ ಹೋರಾಟದ ದಾರಿ ಹಿಡಿಯುತ್ತೇವೆ. ಸೆಪ್ಟೆಂಬರ್ 1 ರಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕ ಪ್ರಕಟಿಸುತ್ತೇವೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments