ಪಿಎಫ್ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಮುಖ್ಯಮಂತ್ರಿಗಳು ಪ್ರವಾಸದಿಂದ ಮರಳಿದ ಮೇಲೆ ಈ ಸಂಬಂಧ ಚರ್ಚೆ ನಡೆಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಪಿಎಫ್‍ಐ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಾವು ಯಾವ ಸಂಘಟನೆಯೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದಿದ್ದಾರೆ.
ಕರಾವಳಿ ಘಟನೆಗೆ ಬಿಜೆಪಿ ಮತ್ತು ಕೆಲ ಸಂಘಟನೆಗಳು ಕಾರಣವಾಗಿದ್ದು, ಚುನಾವಣೆಗೋಸ್ಕರ ಈ ರೀತಿ ಮಾಡಲಾಗಿದೆ. ರಾಜ್ಯದ ಪರಿಸ್ಥಿತಿ ಹದಗೆಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.