ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದರಿಂದ ಆಕ್ರೋಶಗೊಂಡಿರುವ ರೈತರು, ಕಾವೇರಿ ನದಿಗೆ ಇಳಿದು ಪ್ರತಿಭಟನೆ ತೋರಿದ್ದಾರೆ. ಘಟನೆಯಲ್ಲಿ ಮೂವರು ರೈತರು ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಆರ್‌ಎಸ್ ಆಣೆಕಟ್ಟಿಗೆ ನುಗ್ಗದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರೂ ಬ್ಯಾರಿಕೇಡ್‌ಗಳನ್ನು ಕಿತ್ತು ನದಿಗೆ ಎಸೆದ ಪ್ರತಿಭಟನಾಕಾರರು, ಕಾವೇರಿ ನದಿಗೆ ಇಳಿದು ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಅಸ್ವಸ್ಥಗೊಂಡ ಮೂವರು ರೈತರನ್ನು ಕೆಆರ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರ ವ್ಯಾಪಕ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ