ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವವರ ಮೇಲೆ ಆದಾಯ ತೆರಿಗೆ ದಾಳಿ ನಡೆಸುವುದು ಸೂಕ್ತವಾಗಿದೆ. ಆದರೆ, ಈಗ ದಾಳಿ ಮಾಡಿರುವುದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎನ್ನುವ ಮಾಹಿತಿ ಐಟಿ ಅಧಿಕಾರಿಗಳಿಗಿದ್ದಲ್ಲಿ ಅವರು ಮೊದಲೇ ದಾಳಿ ನಡೆಸಬಹುದಿತ್ತು. ಆದರೆ, ಗುಜರಾತ್ ಕಾಂಗ್ರೆಸ್ ಶಾಸಕರು ರೆಸಾರ್ಟ್‌ನಲ್ಲಿರುವ ಸಂದರ್ಭದಲ್ಲಿ ದಾಳಿ ನಡೆಸಿರುವುದು ಚರ್ಚೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಬಾರದು. ಆದರೆ, ಇಂದಿನ ದಾಳಿಯ ಸಮಯ ಸರಿಯಾಗಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಸಂಶಯ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.