Publish Date: Mon, 25 Mar 2019 (16:42 IST)
Updated Date: Mon, 25 Mar 2019 (16:44 IST)
ತುಮಕೂರು ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹೀಗಾಗಿ ಮುದ್ದಹನುಮೇಗೌಡರ ಮನವೊಲಿಕೆಗೆ ಮಾಡಿದ ಕಾಂಗ್ರೆಸ್ ನಾಯಕರ ಪ್ರಯತ್ನ ವಿಫಲವಾದಂತಾಗಿದೆ.
ಬೆಂಗಳೂರು ಉತ್ತರದಿಂದ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಿದ್ರು ಕೈ ಮುಖಂಡರು. ಆದರೆ ಮುದ್ದಹನುಮೇಗೌಡರು ನಿರಾಕರಿಸಿದ್ದು, ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಎದುರು ಅಖಾಡಕ್ಕೆ ಧುಮುಕಿದ್ದಾರೆ.
ಇನ್ನು ಬೆಂಗಳೂರು ಉತ್ತರದಲ್ಲಿ ಬಿ.ಎಲ್.ಶಂಕರ್ ಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಕೊನೆ ಘಳಿಗೆಯಲ್ಲಿ ಪರಿಷತ್ ಸದಸ್ಯ ಗೋವಿಂದರಾಜು ಲಾಬಿ ಶುರುವಿಟ್ಟುಕೊಂಡಿದ್ದಾರೆ.