Webdunia - Bharat's app for daily news and videos

Install App

ಹಾಲಿನ ದರ ಇಳಿಸಿ ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ: ಎಚ್ ಡಿ ಕುಮಾರಸ್ವಾಮಿ ಆಕ್ರೋಶ

Sampriya
ಮಂಗಳವಾರ, 3 ಸೆಪ್ಟಂಬರ್ 2024 (18:42 IST)
ಬೆಂಗಳೂರು: ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿ ರೈತರ ಆಕ್ರೋಶಕ್ಕೆ ತುತ್ತಾಗಿದೆ.

ಈ ಸಂಬಂಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ.

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ.

ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments