ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅರ್ಟಿಕಲ್ 370, 35 ಎ ರದ್ದುಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಮಾತನಾಡಿದ ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಇದು ಭಾರತೀಯ ಪ್ರಜಾಪ್ರಭುತ್ವದ ಅತ್ಯಂತ ಕರಾಳ ದಿನ ಎಂದು ಹೇಳಿದ್ದಾರೆ. 370ನೇ ವಿಧಿ ರದ್ದು ಮಾಡುವುದು ಸಂವಿಧಾನ ಬಾಹಿರ. ಇದರಿಂದ ವಿನಾಶಕಾರಿ ಪರಿಣಾಮಗಳಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತ ಕ್ರಮವಾಗಿ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎನ್ನಲಾಗಿದೆ.