ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಗಳು ಗಂಭೀರವಾಗಿ ತೆಗೆದುಕೊಂಡಿವೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಲೋಕಸಭೆಗೆ ನಡೆಯುತ್ತಿರುವ ಉಪಚುನಾವಣೆ ಜನರಿಗೆ ಬೇಕಿರಲಿಲ್ಲ. ಎಂಪಿ ಕ್ಷೇತ್ರಗಳ ಉಪಚುನಾವಣೆಯನ್ನು ಅನಿವಾರ್ಯ ಹಾಗೂ ಅನೀರಿಕ್ಷಿತವಾಗಿ ಎದುರಿಸಬೇಕಾಗಿದೆ ಎಂದಿದ್ದಾರೆ. ಹೀಗಾಗಿ ಚುನಾವಣೆಗೆ ಸಿದ್ಧಗೊಂಡಿರುವುದಾಗಿ ಹೇಳಿದ್ದಾರೆ.
ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಡಲಾಗಿದೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಸಿಎಂ ಹೇಳಿದರು.
ರಾಮನಗರದಿಂದ ಅನಿತಾ ಕುಮಾರಸ್ವಾಮಿ, ಮಂಡ್ಯದಿಂದ ಎಲ್.ಆರ್.ಶಿವರಾಮೇಗೌಡ, ಶಿವಮೊಗ್ಗದಿಂದ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಿದರು.