ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ , ನಟಿ ರಾಗಿಣಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಸಚಿವ ಸಿಟಿ ರವಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಬಂಧಿಸಲಾಗಿದೆ. ಈ ವಿಚಾರಕ್ಕೆಸಂಬಂಧಿಸದಂತೆ ಸಚಿವ ಸಿಟಿ ರವಿ, ತನಿಖಾ ತಂಡದ ಮೇಲೆ ಒತ್ತಡ ತರುವ ಕೆಲಸ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಬಗ್ಗೆ ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಟಿ ರವಿಗೆ ಅವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.