Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕುಡಿಯುವ ನೀರಿನ ಕಾಮಗಾರಿ ಬೇಗ ಪೂರ್ಣಗೊಳಿಸಿ ಎಂದ ಕಾರ್ಯದರ್ಶಿ

ಕುಡಿಯುವ ನೀರಿನ ಕಾಮಗಾರಿ ಬೇಗ ಪೂರ್ಣಗೊಳಿಸಿ ಎಂದ ಕಾರ್ಯದರ್ಶಿ
ಕಲಬುರಗಿ , ಶುಕ್ರವಾರ, 16 ನವೆಂಬರ್ 2018 (19:15 IST)
ಬರಗಾಲದಿಂದ ತತ್ತರಿಸಿರುವ ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗ ಪ್ರಥಮಾದ್ಯತೆ ಮೇರೆಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿವಿಧ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ 7 ತಾಲೂಕುಗಳ ಪೈಕಿ 6 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ.

ಈ  ಹಿನ್ನೆಲೆಯಲ್ಲಿ ಇದಕ್ಕಾಗಿ ಬಿಡುಗಡೆಯಾಗಿರುವ ಅನುದಾನವನ್ನು ನೀರು ಮತ್ತು ಮೇವಿಗೆ ಸಮರ್ಪಕವಾಗಿ ಖರ್ಚು ಮಾಡಿ ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬರ ನಿರ್ವಹಣೆ ಕಾಮಗಾರಿಯನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ಇರುವ ಕಾರಣ ಇದನ್ನು ಗಂಭೀರವಾಗಿ ಪರಗಣಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವದಂತಿ ಸುಳ್ಳು ಎಂದ ಸಂಸದೆ