ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ತೊಡಗಿರುವ ಆರೋಗ್ಯ ರಕ್ಷಣಾ ಕಾರ್ಯಕರ್ತರಿಗೆ 14 ದಿನಗಳ ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ ಅವಶ್ಯಕತೆಯಿಲ್ಲ.
ಹೀಗಂತ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯಂತೆ ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು, ಶುಶ್ರೂಷಕಿಯರು, ಪ್ರಯೋಗಶಾಲಾ ತಂತ್ರಜ್ಞರು, ಗ್ರೂಪ್ ಡಿ ನೌಕರರು 14 ದಿನಗಳ ಕ್ವಾರಂಟೈನ್ ಗೆ ಒಳಪಡಿಸುವುದು ಅವಶ್ಯಕತೆಯಿಲ್ಲ ಎಂದರು.
ಪಿಪಿಇ ಕಿಟ್, ಅವಶ್ಯಕ ಸುರಕ್ಷತಾ ಸಲಕರಣೆಗಳೊಂದಿಗೆ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಅಪಾಯ ಕಡಿಮೆ ಇರುವುದರಿಂದ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ ಎಂದು ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.