ಬೆಂಗಳೂರು : ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು, ಟೆಲಿಫೋನ್ ಕದ್ದಾಲಿಕೆ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಇದ್ದ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು, ಅತೃಪ್ತ ಶಾಸಕರು ಸೇರಿದಂತೆ ಹಲವು ಬಿಜೆಪಿ ಮುಖಂಡರ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂಬ ಅರೋಪ ಕೇಳಿ ಬಂದಿತ್ತು.