ಬೆಂಗಳೂರು : ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಅದರ ಜೊತೆಗೆ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 5 ಲಕ್ಷ ಶಾಲಾ ಮಕ್ಕಳಿಗೆ ಮತ್ತೆ ಸೈಕಲ್ ವಿತರಣೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೃಷ್ಣ ಭೈರೇಗೌಡ ಅವರು, 189 ಕೋಟಿ ರೂ. ವೆಚ್ಚದಲ್ಲಿ 2019-20ನೇ ಸಾಲಿನ 5 ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಷ್ಟೇ ಅಲ್ಲದೆ ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣವನ್ನು ಶೇ 25 ರಷ್ಟು ಏರಿಸಲು ನಿರ್ಧಾರ ಮಾಡಲಾಗಿದೆ. ಅದರಲ್ಲಿ ಶೇ 25 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.