ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಸಮಂಜಸ. ಆದರೆ, ಈ ತೀರ್ಪಿನಿಂದ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ ಎನ್ನಲಾಗುವುದಿಲ್ಲ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್ಯ ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ತರಾತುರಿಯಲ್ಲಿ ಆದೇಶ ನೀಡಿದೆ. ಕಾವೇರಿಯಿಂದ 1500 ಟಿಎಂಸಿ ನೀರು ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಸರಕಾರ ಸಮ್ಮತಿ ಸೂಚಿಸಿತ್ತು. ಆದರೆ, ಹೆಚ್ಚುವರಿಯಾಗಿ 500 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಆದೇಶ ನೀಡಿದೆ. ಈ ತೀರ್ಪು ಆಘಾತಕಾರಿ ಎಂದು ಹೇಳಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಬರ ಪರಿಸ್ಥಿತಿ ಇದೇ ಎನ್ನುವ ರೀತಿಯಲ್ಲಿ ಆದೇಶ ನೀಡಿದೆ ಎಂದು ಆರೋಪಿಸಿದರು.
ಕರ್ನಾಟಕದ ವಾದವನ್ನು ಮೊದಲ ಬಾರಿಗೆ ಒಪ್ಪಿಕೊಂಡಿರುವ ಸುಪ್ರೀಕೋರ್ಟ್, ಅಕ್ಟೋಬರ್ 7 ರಿಂದ 18 ರವರೆಗೆ ಕಾವೇರಿ ನದಿಯಿಂದ ಪ್ರತಿ ದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ