ಕ್ರೀಡಾ ಸ್ಪರ್ಧೆಗಳಲ್ಲಿ ಮಿಂಚಲು ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿಗಳಿಂದ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದೀಗ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಅಂತರ್ ಶಾಲಾ ಆಟಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ ಹಲವಾರು ಪದಕಗಳನ್ನು ಗೆಲ್ಲುವಲ್ಲಿ ತನ್ನ ಶಾಲೆಗೆ ಮಾರ್ಗದರ್ಶನ ನೀಡಿದ್ದ ಎನ್ನಲಾಗಿದೆ.
ಆರೋಪಿ ಸಹಾಯಕ ಶಿಕ್ಷಕನನ್ನು 47 ವರ್ಷದ ದೀಪಕ್ ಕುಮಾರ್ ಸೋನಿ ಎಂದು ಗುರುತಿಸಲಾಗಿದೆ. ಶಿಕ್ಷಕ ಬಲೋಡ್ ಜಿಲ್ಲೆಯ ಜುಂಗೇರಾ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾನೆ. ವರದಿಯ ಪ್ರಕಾರ ಆರೋಪಿಯು ಮಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಖೋ-ಖೋ ಮತ್ತು ಕಬಡ್ಡಿ ತರಬೇತಿಯನ್ನೂ ನೀಡಿದ್ದಾನೆ.
ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯರಿಗೆ ದೀಪಕ್ ಕುಮಾರ್ ಸೋನಿ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ತಮ್ಮ ಶಿಕ್ಷಕರು ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಐವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ದೂರು ದಾಖಲಿಸಿದ್ದಾರೆ.