ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದ್ದೇವೆ. ಆದರೆ ಜೆಡಿಎಸ್ ದ್ರೋಹ ಬಗೆಯಿತು. ನಾನು ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳುಗಳಲ್ಲಿ ಷರತ್ತುಗಳನ್ನು ಹಾಕಿದರು. ನಾನು ಅವರ ಷರತ್ತುಗಳನ್ನು ಒಪ್ಪದೆ ರಾಜೀನಾಮೆ ನೀಡಿ ನಿಮ್ಮ ಮುಂದೆ ಬಂದೆ ಎಂದು ತಿಳಿಸಿದ್ದಾರೆ.
ಭಾಗ್ಯಲಕ್ಷ್ಮಿ ಯೋಜನೆಯನ್ನು ನಾನು 5 ಲಕ್ಷ ರೂಪಾಯಿಗಳಿಗೆ ನಿಗದಿಪಡಿಸಿದ್ದೆ. ಆದರೆ, ಕಾಂಗ್ರೆಸ್ ಸರಕಾರ ಅದನ್ನು 3 ಲಕ್ಷಕ್ಕೆ ಇಳಿಸಿತು. ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ನಮ್ಮ ರಾಜ್ಯದಲ್ಲಿಯೇ ಹಬ್ಬ ಹರಿದಿನಗಳನ್ನು ಮಾಡಲು ಸರಕಾರ ಬಿಡುತ್ತಿಲ್ಲ. ಇದನ್ನು ನೋಡಿದಲ್ಲಿ ನಾವು ಯಾವ ದೇಶದ ರಾಜ್ಯದಲ್ಲಿ ಇದ್ದೇವೆ ಎನ್ನುವ ಅನುಮಾನ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.