Publish Date: Wed, 06 May 2020 (14:35 IST)
Updated Date: Wed, 06 May 2020 (14:37 IST)
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮಾರಕ ರೋಗಕ್ಕೆ ಗುಡ್ ಬೈ ಹೇಳಿದ್ದಾರೆ.
ಕಲಬುರಗಿ ನಗರದ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಇವರಿಬ್ಬರಿಗೂ ಏ.20ರಂದು ಕೊರೋನಾ ಸೋಂಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿಸಿತ್ತು.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 64ರಲ್ಲಿ ಒಟ್ಟು 24 ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 34 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.