Publish Date: Fri, 24 Aug 2018 (15:43 IST)
Updated Date: Fri, 24 Aug 2018 (15:45 IST)
ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಗ್ಲಾಸ್ ಹೌಸ್ ಬಳಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ವಾಶೀಮ್ ಎಂಬ ಯುವಕನೇ ಚಾಕುವಿನಿಂದ ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಗಾಯಾಳು ಯುವಕನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.
ದಾವೂದ್ ಸೇರಿದಂತೆ ಐದು ಜನರ ಗುಂಪು ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಘಟನೆ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.