ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದ್ದು, ಇನ್ಮುಂದೆ ರಾತ್ರಿ ವೇಳೆಯೂ ಬಸ್ ಗಳು ಸಂಚರಿಸಲಿವೆ.
ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ದೂರದ ಊರುಗಳ ಪ್ರಯಾಣ ಅವಧಿಯಲ್ಲಿ ಸ್ವಲ್ಪ ಹೆಚ್ಚಳವಾದರೂ ಸೇವೆ ನೀಡಲಾಗುವುದು. ಪ್ರಯಾಣಿಕರ ಲಭ್ಯತೆ ಆಧರಿಸಿ ಶೀಘ್ರದಲ್ಲಿಯೇ ಬಸ್ಸುಗಳ ರಾತ್ರಿ ಸಂಚಾರವನ್ನೂ ಕೂಡ ಪುನರಾರಂಭಿಸಲಾಗುವುದು. ಕೋವಿಡ್ ಲಾಕ್ ಡೌನ್ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು 1700 ಕೋಟಿ ರೂ.ನಷ್ಟ ಅನುಭವಿಸಿವೆ. ಹಾನಿ ಇನ್ನೂ ಮುಂದುವರೆದಿದೆ ಎಂದಿದ್ದಾರೆ.