Publish Date: Wed, 18 Mar 2020 (19:40 IST)
Updated Date: Wed, 18 Mar 2020 (19:43 IST)
ಈ ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳು ಕಂಡು ಬಂದಿಲ್ಲ. ಹೀಗಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಫೆಬ್ರವರಿಯಿಂದ ಮಾರ್ಚ್ 18ರ ವರೆಗೆ ವಿದೇಶಗಳಿಂದ 92 ಜನರು ಬಂದಿದ್ದು, ಇದರಲ್ಲಿ ಓರ್ವ ಅಮೆರಿಕಾ ಪ್ರಜೇಯಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.
92 ಜನರಲ್ಲಿ 29 ಜನರಿಗೆ 14 ದಿನಗಳ ಹೋಮ್ ಕ್ವಾರೆಂಟೈನ್ ಪೂರ್ಣಗೊಳಿಸಿದ್ದು, ಉಳಿದ 63 ಜನರಿಗೆ ಪ್ರತ್ಯೇಕವಾಗಿ ಕೊಠಡಿಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪ್ರಕರಣ ಕಂಡುಬಂದಿಲ್ಲ. ಆದ್ದರಿಂದ ಸಾರ್ವಜನಿಕರು, ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.