ಬೆಂಗಳೂರು : ಮದ್ಯ ನಿಷೇಧಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರಬಲ ಪ್ರತಿಭಟನೆ ನಡೆಸಿದ ಮಹಿಳೆಯರ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವಿನ ಸಂಧಾನ ಮುರಿದು ಬಿದ್ದಿದೆ.
ಗಂಡಸರು ಮದ್ಯದ ಸಹವಾಸ ಮಾಡಿ ಅವರ ಹೆಂಡ್ತಿ ಮಕ್ಕಳು ಹಾಗೂ ಮನೆ ಮಂದಿ ಉಪವಾಸವಿರುವಂತಾಗಿದೆ. ಈ ಮದ್ಯದಿಂದ ಚಿಕ್ಕಮಕ್ಕಳ ಜೀವನವೂ ಹಾಳುಗುತ್ತಿದೆ ಎಂದು ಸಾವಿರಾರು ಮಹಿಳೆಯರು ಮದ್ಯವನ್ನು ನಿಷೇಧ ಮಾಡಬೇಕೆಂದು ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಹೋರಾಟಗಾರರ ಪ್ರತಿನಿಧಿಗಳಾದ ರಂಗಕರ್ಮಿ ಪ್ರಸನ್ನ ಹಾಗೂ ಸ್ವರ್ಣ ಭಟ್ ಅವರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತುಕತೆ ನಡೆಸಿ ಏಕಾಏಕಿ ಮದ್ಯ ನಿಷೇಧ ಜಾರಿಗೆ ತರುವುದು ಸಾಧ್ಯವಿಲ್ಲ. ಈ ಬಗ್ಗೆ ನಿಮ್ಮನ್ನು ಒಳಗೊಂಡು ಪ್ರತ್ಯೇಕ ಸಭೆ ನಡೆಸುತ್ತೇನೆ. ಈಗ ಪ್ರತಿಭಟನೆ ಕೈ ಬಿಡಿ ಎಂದು ಮುಖ್ಯಮಂತ್ರಿ ಮಾಡಿದ ಮನವಿ ಮಾಡಿದ್ದಾರೆ.
ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ಹೋರಾಟಗಾರರು ಮನವಿಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಅನಿವಾರ್ಯವಾಗಿ ಒಂದಷ್ಟು ಜನರನ್ನು ವಶಕ್ಕೆ ಪಡೆದು ಪ್ರತಿಭಟನಾಕಾರರು ಸ್ಥಳದಿಂದ ಚದುರುವಂತೆ ಮಾಡಿದರು. ಕೆಲವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದು ಊರುಗಳಿಗೆ ಹೋಗಲು ವ್ಯವಸ್ಥೆ ಮಾಡಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.