Publish Date: Sat, 21 Jan 2023 (14:21 IST)
Updated Date: Sat, 21 Jan 2023 (13:11 IST)
ಕಲಬುರಗಿ : ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದ ಪರವಾದ ವಾತಾವರಣ ನಿರ್ಮಾಣವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಶಕ್ತಿಗೂ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರವುದನ್ನು ತಡೆಯಲು ಆಗುವುದಿಲ್ಲ.
ಅನೇಕರು ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಕನ ಕನಸು ಕಾಣುತ್ತಾ ಓಡಾಟ ನಡೆಸಿದ್ದಾರೆ. ಆದರೆ, ಅದ್ಯಾವುದು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಹೇಳಿದರು.