ಬೀಳಗಿ ಶಾಸಕ ಜಿ.ಟಿ.ಪಾಟೀಲ್‌ಗೆ ಸಂಬಂಧಿಸಿದ ಸಿಡಿ ಇದೆ ಎನ್ನುವುದು ಕೇವಲ ಊಹಾಪೋಹ. ಊಹಾಪೋಹದ ಹಿನ್ನೆಲೆಯಲ್ಲಿ ಸೇಫ್ಟಿಗಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಹುಬ್ಬಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡದೇ ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿ ಮಾಡಲು ಸಾಧ್ಯವೇ ಇಲ್ಲ. ಈ ಕೂಡಲೇ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು. ಕಳಸಾ ಬಂಡೂರಿ ಸಮಸ್ಯೆ ಬಗೆಹರಿಸಲು ಪ್ರಧಾನಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ಮಾತನಾಡಿದ ಅವರು, ನಾವು ಯಾವತ್ತು ಮೀಸಲಾತಿ ಪರವಾಗಿಯೇ ಇರುತ್ತೇವೆ. ಆದರೆ, ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ