ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ವ್ಯತ್ಯಾಸವೇ ಇಲ್ಲವೆಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಗುಡುಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾಂಗ್ರೆಸ್ ಮುಕ್ತ ಮಾಡಲು ಹೊರಟಿದ್ದಾರೆ. ಆಡಳಿತದಲ್ಲಿ ಮುಖ್ಯಮಂತ್ರಿಯವರು ಹಿನ್ನೆಡೆ ಸಾಧಿಸಿದ್ದಾರೆ.
ಸೋರಿಕೆಯಾಗುತ್ತಿರುವ ತೆರಿಗೆ ಹಣವನ್ನು ಪೊಲೀಸರ ಕಷ್ಟಗಳಿಗೆ ಸಮರ್ಪಕವಾಗಿ ಖರ್ಚು ಮಾಡಲು ಮುಖ್ಯಮಂತ್ರಿ ಅವರು ವಿಫಲವಾಗಿದ್ದಾರೆ. ರಾಜ್ಯ ಪೊಲೀಸರು ಪ್ರತಿಭಟನೆ ಕೈಗೊಂಡಿದಕ್ಕೆ ಎಸ್ಮಾ ಕಾಯ್ದೆ ಜಾರಿ ಮಾಡಿದ್ದೀರಿ, ನಿಮ್ಮದೇನು ಹಿಟ್ಲರ್ ಸರಕಾರವೇ? ಇದರಿಂದ ರಾಜ್ಯದಲ್ಲಿ ಸರಕಾರದ ಮಾನ ಹರಾಜಾಗಿದೆ ಎಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿಯವರು ರಾಜ್ಯದಲ್ಲಿ ಸಾರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಯಾರೇ ಪ್ರತಿಭಟನೆ ಕೈಗೊಂಡರು ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುತ್ತಿರಿ. ನಿಮ್ಮ ವರ್ತನೆ ಹೀಗೆ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿರಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ