Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಲ್ಲ- ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಲ್ಲ- ಲಕ್ಷ್ಮೀ ಹೆಬ್ಬಾಳ್ಕರ್
bangalore , ಗುರುವಾರ, 15 ಜೂನ್ 2023 (13:54 IST)
ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಹಿನ್ನೆಲೆ ಲಕ್ಷ್ಮಿ ಹೆಬ್ಬಾಳ್ಕರ್  ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ.ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹತ್ವದ ನಿರ್ಧಾರ ಆಗಿದೆ.ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಗೃಹ ಲಕ್ಷ್ಮಿ ಯೋಜನೆ.ಮನೆಯ ಯಜಮಾನಿ ಶಕ್ತಿಶಾಲಿಯಾಗ್ತಾಳೆ ಆಗ ಸಮಾಜದ ಶಕ್ತಿ ವೃದ್ದಿ ಆಗ್ತದೆ.ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ.ನಾಳೆಯಿಂದ ಅರ್ಜಿ ಸಲ್ಲಿಸಬಹುದು.ಕೆಲವೊಂದು ಕಾರಣಗಳಿಂದ ಜೂನ್ ೧೬ ರಿಂದ ಅರ್ಜಿ ಸಲ್ಲಿಸಬಹುದು.ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೂಲಕ ಭೌತಿಕವಾಗಿ ಕೂಡ ಅರ್ಜಿ ಸಲ್ಲಿಸಬಹುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
 
ಆಧಾರ್ ಕಾರ್ಡ್ ಓಟಿಪಿ ನೀಡಬೇಕಾಗುತ್ತದೆ.ಅರ್ಜಿ ಸಲ್ಲಿಸುವಾಗ ಆದಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬೇಕು.ಅರ್ಜಿ ಸಲ್ಲಿಕೆಗೆ ಯಾವುದೇ ಫೀಸ್ ಕೊಡುವಂತಿಲ್ಲ.ಉಚಿತವಾಗಿ ಅರ್ಜಿ ಸಲ್ಲಿಸಿ ಮಧ್ಯವರ್ತಿಗಳ ಹಾವಳಿ ಭ್ರಷ್ಟಾಚಾರ ತಪ್ಪಿಸಲು ನೇರವಾಗಿ ಹೋಗಿ ಅರ್ಜಿ ಸಲ್ಲಿಸಿ.ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಟ್ಟಿಲ್ಲ .ನಾಳೆ ಮಧ್ಯಾಹ್ನ ೧.೩೦ ಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.ಸಾಂಕೇತಿಕವಾಗಿ ಸಿಎಂ ರಿಂದಲೇ ಸೇವಾ ಸಿಂಧು ವೆಬ್  ಲಾಂಚ್ ಮಾಡಲಿದ್ದಾರೆ.ಸಿಎಂ ರಿಂದ ಸಾಂಕೇತಿಕವಾಗಿ ಐದು ಫಲಾನುಭವಿಗಳು ಅರ್ಜಿ ಸಲ್ಲಿಕೆಯಾಗಲಿದೆ.ನಾಳೆ ಶಕ್ತಿ ಭವನದಲ್ಲಿ ಸಿಎಂ ರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
 
ಟ್ಯಾಕ್ಸ್ ಪೇಯರ್ಸ್ ಇದ್ದು ಸುಳ್ಳು ಮಾಹಿತಿ ನೀಡಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ.ಸುಳ್ಳು ಮಾಹಿತಿ ನೀಡುವವರ ವಿರುದ್ದ ಇಲಾಖೆ ಪ್ಲಾನ್ ಮಾಡಿದೆ.ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ.ಇ ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ.ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ.ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ
 

Share this Story:

Follow Webdunia kannada

ಮುಂದಿನ ಸುದ್ದಿ

2022- 23 ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ