ಸಚಿವರು, ಮುಖಂಡರು, ಶಾಸಕರ ಮಧ್ಯೆ ಹೊಂದಾಣಿಕೆಯಿಲ್ಲದಿರುವುದರಿಂದ ನಮ್ಮಲ್ಲಿರುವ ಸಮಸ್ಯೆಗಳ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು, ಮುಖಂಡರು, ಶಾಸಕರ ಸಭೆ ಮೇ 22 ರಿಂದ 26 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯಲ್ಲಿ ಪರಸ್ಪರರ ಮಧ್ಯೆ ಎದುರಾಗಿರುವ ಭಿನ್ನಮತಗಳ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ ಪಕ್ಷವನ್ನು ಇಂದಿನಿಂದಲೇ ಸಜ್ಜುಗೊಳಿಸುವುದು ಅಗತ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಒಂದಾಗಿ ಚುನಾವಣೆ ಎದುರಿಸಿದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.