Publish Date: Tue, 22 Mar 2022 (14:29 IST)
Updated Date: Tue, 22 Mar 2022 (15:30 IST)
ಬೆಂಗಳೂರು : ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಖಂಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಮೇಕೆದಾಟು ಯೋಜನೆ ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಿದ್ದೇವೆ.
ಇಷ್ಟೆಲ್ಲಾ ಇದ್ದರೂ ತಮಿಳುನಾಡಿನವರು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.