ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು. ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಗ್ಗೆ ಚಾಕು ಹಾಕಿದರು ಎಂದು ಈಶ್ವರಪ್ಪ ಹೇಳಿದರು