ವಿಚಾರವಾದಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಕೈವಾಡವಿಲ್ಲ. ಮಹಾರಾಷ್ಟ್ರದ ಎಸ್‌ಐಟಿ ವಿನಾಕಾರಣ ಸನಾತನ ಸಂಸ್ಥೆ ವಿರುದ್ಧ ಆರೋಪ ಮಾಡುತ್ತಿದೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಅಭಯ ವರ್ತಕ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕಲಬುರ್ಗಿ ಹತ್ಯೆ ಪ್ರಕರಣವನ್ನು ಕೈಗೆತ್ತಿಗೊಂಡಿರುವ ಕರ್ನಾಟಕದ ಸಿಐಡಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮಹಾರಾಷ್ಟ್ರ ಎಸ್‌ಐಟಿ ಪೊಲೀಸರನ್ನು ಅನುಕರಿಸಬಾರದು ಎಂದು ಆಗ್ರಹಿಸಿದರು.
ವಿಚಾರವಾದಿ ಎಂ.ಎಂ.ಕಲಬುರ್ಗಿ, ನರೇಂದ್ರ ದಾಬೋಳ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆ ವಿಚಾರದಲ್ಲಿ ಸನಾತನ ಸಂಸ್ಥೆ ಎಲ್ಲಾ ರೀತಿಯಲ್ಲೂ ತನಿಖೆಗೆ ಸಹಕರಿಸಿದೆ. ಇದೇ ರೀತಿ ಮುಂದೆಯೂ ಸಹಕರಿಸಲಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದ ಎಸ್‌ಐಟಿ ಸನಾತನ ಸಂಸ್ಥೆಯ ಒಂದು ಸಾವಿರ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಈವರೆಗೂ ನ್ಯಾಯಾಲಯಕ್ಕೆ ಸಾಕ್ಷಿಗಳನ್ನು ಹಾಜರು ಪಡಿಸುತ್ತಿಲ್ಲ. ಜಾರ್ಜ್‌ಶೀಟ್ ಸಲ್ಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಸನಾತನ ಸಂಸ್ಥೆ ಆರೋಪಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ