ಬೆಂಗಳೂರು : ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ರಸಗೊಬ್ಬರ ಪೂರೈಕೆ ಮಾಡಲಾಗುವುದು ಎಂದು ಕೃಷಿ ಇಲಾಖೆ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ರಸಗೊಬ್ಬರದ ಕೊರತೆಯಾಗಲ್ಲ. ರೈತರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಜಿಲ್ಲೆಗಳಲ್ಲಿ 2,06,740 ಟನ್ ರಸಗೊಬ್ಬರ ದಾಸ್ತಾನು ಇದೆ. 1,55,468 ಮೆಟ್ರಿಕ್ ಟನ್ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಲಾಗುವುದು ಎಂದು ಕೃಷಿ ಇಲಾಖೆ ಸಚಿವ ಬಿಸಿ ಪಾಟೀಲ್ ತಿಳಿಸಿದ್ದಾರೆ.