Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹುಬ್ಬಳ್ಳಿ : ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಶನಿವಾರ ಇಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ ಪಕ್ಷ ಹಾಗೂ ನಮ್ಮ ವಿರುದ್ದ ಒಂದೇ ವಿಚಾರ ಇಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮ ವಿರುದ್ದ ವೈಯಕ್ತಿಕ ನಿಂದನೆ ಮಾಡುವ ಮೂಲಕ ತಮ್ಮ ವ್ಯಕ್ತಿತ್ವ ಕುಂದಿಸಿಕೊಳ್ಳುವ ಕೆಲಸ ಮಾಡಬಾರದು ಎಂದರು.