ಮಂಗಳೂರು : ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ನಿಷೇಧಿಸಲಾಗಿದೆ.
ಆನ್ಲೈನ್ ಗೇಮ್, ಲೋನ್ ಆ್ಯಪ್ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಆನ್ಲೈನ್ ಗೇಮ್, ಲೋನ್ ಆ್ಯಪ್ಗಳಿಂದ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ ಎಂದರು.ಅಪರಾಧ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆನ್ಲೈನ್ ಗೇಮ್, ಲೋನ್ ಆ್ಯಪ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ.
ಜತೆಗೆ, ಸೈಬರ್ ಕ್ರೈಂ ಕಡಿಮೆ ಮಾಡಲು ಆನ್ಲೈನ್ ಬೆಟ್ಟಿಂಗ್ ನಿಷೇಧ ಮಾಡುವ ಬಗ್ಗೆಯೂ ಯೋಚಿಸಲಾಗಿದೆ. ಇದೊಂದು ಜೂಜುದಂಧೆ ಇದ್ದಂತೆ. ಇದರಿಂದ ಜನ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದರು.