ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಯಲ್ಲಿ ರಾಜಕೀಯ ಪಕ್ಷಗಳು, ಶಾಸಕರು, ತೊಡಗಿಕೊಳ್ಳುತ್ತಿರುವುದರಿಂದ ವಿಧಾನಸಭೆಯ ಅಧಿವೇಶನವನ್ನು ನಿಗದಿತ ಅವಧಿಗೂ ಮುನ್ನ ಮೊಟಕು ಗೊಳಿಸಲು ಉದ್ದೇಶಿಸಲಾಗಿದೆ.
ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಅಧಿವೇಶನಕ್ಕೆ ಬರದಿರುವುದರಿಂದ ಅಧಿವೇಶನ ಕಳೆ ಕಟ್ಟುತ್ತಿಲ್ಲ. ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿದೆ ಎಂಬ ನೆಪವೊಡ್ಡಿ ತಿಂಗಳ ಅಂತ್ಯದವರೆಗೂ ನಡೆಯಬೇಕಿದ್ದ ಅಧಿವೇಶನವನ್ನು ಫೆ.23ಕ್ಕೆ ಮುಕ್ತಾಯಗೊಳಿಸಲಾಗುತ್ತಿದೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸರ್ಕಾರ ಉತ್ತರ ನೀಡಿದ ನಂತರ ಲೇಖಾನುದಾನ ಪಡೆದು ಅಧಿವೇಶನವನ್ನು ಅನಿರ್ದಿಷ್ಟಾವಧಿ ಮುಂದೂಡಲು ಚಿಂತನೆ ನಡೆದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.