ರಾಜ್ಯದ ಈ ಜಿಲ್ಲೆ ಇದೀಗ ಕೊರೊನಾ ಮುಕ್ತವಾಗಿದೆ.
ಕೋವಿಡ್-19 ಸೋಂಕಿನಿಂದ ಗುಣಮುಖರಾದ 12 ಮಂದಿಯನ್ನು ಚಿತ್ರದುರ್ಗದ ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಿಂದ ಬಿಡುಗಡೆ ಮಾಡಲಾಯಿತು. ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಕೊಟ್ಟರು.
ಕೋವಿಡ್ ವೈರಸ್ ಸೋಂಕು ದೃಢಪಟ್ಟಿದ್ದ ಪಿ-2232, ಪಿ-2239, ಪಿ-2240, ಪಿ-2241, ಪಿ-2242, ಪಿ-2244, ಪಿ-2245, ಪಿ-2246, ಪಿ-2249, ಪಿ-2455, ಪಿ-2456, ಪಿ-2457 ಸೇರಿದಂತೆ ಒಟ್ಟು 12 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರು.
ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯು ಕೊರೊನಾ ಸೋಂಕಿನಿಂದ ಮುಕ್ತವಾಗಿದೆ.