Publish Date: Tue, 20 Jun 2023 (14:30 IST)
Updated Date: Tue, 20 Jun 2023 (13:32 IST)
ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ಎನ್ನುವ ಮೂಲಕ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ. ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ಕೈ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನು ಆವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರಿಸಿರುವ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ.