Webdunia - Bharat's app for daily news and videos

Install App

ಎಂದಿನಂತಿರಲ್ಲ ಈ ಬಾರಿಯ ಮೈಸೂರು ದಸರಾ: ವಿಶ್ವವಿಖ್ಯಾತ ಹಬ್ಬಕ್ಕೆ ಹೊಸ ಲುಕ್ ನೀಡಲು ಸಿಎಂ ಸೂಚನೆ

Sampriya
ಸೋಮವಾರ, 12 ಆಗಸ್ಟ್ 2024 (19:09 IST)
Photo Courtesy X
ಬೆಂಗಳೂರು: ದಸರಾ ಮಹೋತ್ಸವ ಆಯೋಜನೆಯ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು.

ಸಭೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,  ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ - ಬರ ಇರುವ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ.

ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ.
ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ.

ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು.
ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು.

'ಕರ್ನಾಟಕ ಸಂಭ್ರಮ -50' ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು.
ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು.

ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments