ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಜುಲೈ 12, 19, 26 ಹಾಗೂ ವರ್ದಂತಿಯು 27 ರಂದು ಮತ್ತು ಆಗಸ್ಟ್ 2ರಂದು ಕಡೆಯ ಆಷಾಢ ಶುಕ್ರವಾರ ಆಗಲಿದೆ. ಈ ಐದು ದಿನಗಳಲ್ಲಿ ದೇವಾಲಯದ ವತಿಯಿಂದ ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದರು.
ಇನ್ನೂ ಸಾರ್ವಜನಿಕರು ವಾಹನವನ್ನು ಲಲಿತಾ ಮಹಲ್ ಪಾರ್ಕ್ ಮಾಡಬೇಕೆಂದರು. ಇನ್ನು ಈ ವೇಳೆ ದೇವಿಯ ದರ್ಶನಕ್ಕೆ ಯಾವುದೇ ಪಾಸ್ ವ್ಯವಸ್ಥೆಯನ್ನು ಮಾಡುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ 50 ಹಾಗೂ 300 ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು ಎಂದು ತಿಳಿಸಿದರು.<>