ಬೀದರ್ : ಕಾಂಗ್ರೆಸ್ ಗೆ ಮತ ಹಾಕಿದವರು ಪಾಕಿಸ್ತಾನಕ್ಕೆ ಹೋಗಬೇಕಾಗುತ್ತದೆ ಎಂದು ಔರಾದ್ ಮೀಸಲು ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಔರಾದ್ ತಾಲೂಕಿನ ಸಂತಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರಭು ಚವ್ಹಾಣ್, ದೇಶ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಿದೆ. ಬಿಜೆಪಿಗೆ ಮತ ಹಾಕಿದವರು ದೇಶದ ರಕ್ಷಣೆ ಮಾಡುವವರಿಗೆ ಮತ ಹಾಕಿದ ಹಾಗೆ. ಕಾಂಗ್ರೆಸ್ ಗೆ ಮತ ಹಾಕಿದವರು ಪಾಕಿಸ್ತಾನಕ್ಕೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ದೇಶ ಒಡೆಯುವ ಪಕ್ಷವಾಗಿದೆ. ಬಿಜೆಪಿ ದೇಶದ ರಕ್ಷಣೆ ಮಾಡುವ ಪಕ್ಷವಾಗಿದೆ. ಹೀಗಾಗಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷದ ಪರ ಪ್ರಚಾರ ಮಾಡಿ ಬಿಜೆಪಿಗೆ ಮತ ಹಾಕಿಸಿ ಗೆಲ್ಲಿಸಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.