Webdunia - Bharat's app for daily news and videos

Install App

ಪಾಕಿಸ್ತಾನ್‌ ಪರ ಘೋಷಣೆ ಕೂಗಿದವರು ಬಿಜೆಪಿಯವರೂ- ಡಿ.ಕೆ. ಶಿವಕುಮಾರ್‌

geetha
ಮಂಗಳವಾರ, 5 ಮಾರ್ಚ್ 2024 (16:45 IST)
ಬೆಂಗಳೂರು : ನಮ್ಮ ಸಚಿವರಾದ ಪ್ರಿಯಾಂಕ್‌ ಖರ್ಗೆ  ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ಸ್ವಂತ ಅಭಿಪ್ರಾಯವಾಗಿದೆ. ಆದರೆ ಕೊನೆಗೆ ಪೊಲೀಸರು ತಮ್ಮ ಕ್ರಮದ ಪ್ರಕಾರವೇ ತನಿಖೆ ನಡೆಸಬೇಕಿದೆ ಎಂದು ಡಿ.ಕೆ.ಶಿವಕುಮಾರ್‌ ನುಡಿದರು. 
 
ಈ ಹಿಂದೆ ಬಿಜೆಪಿ ಪ್ರತಿಭಟನೆಯಲ್ಲಿಯೂ ಸಹ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ವಿಡಿಯೋಗಳಿವೆ. ಅವರಿಗೆಲ್ಲ ಏನು ಮಾಡಬೇಕೆಂದು ನನ್ನ ಬಿಜೆಪಿ ಮಿತ್ರರೇ ಹೇಳಬೇಕು ಎಂದು ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಮಂಗಳವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದರು. 

ದೇಶವಿರೋಧಿ ಘೋಷಣೆಗಳನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಪ್ರಕರಣದಲ್ಲಿ ಯಾರೇ ತಪ್ಪಿತಸ್ತರಾಗಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲಿದೆ. ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಪೂರ್ಣಗೊಂಡ ಬಳಿಕ ಖಚಿತ ಮಾಹಿತಿ ದೊರೆಯಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು. ಈ ವಿಷಯದಲ್ಲಿ ಯಾರೇ ಕಿಡಿಗೇಡಿತನ ನಡೆಸಿದ್ದರೂ ಅದು ಅಕ್ಷಮ್ಯ ಅಪರಾಧ. ಇದರಿಂದ ಪಕ್ಷಕ್ಕೆ ಮುಜುಗರವಾಗುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments