ಟೊಮೋಟೋ, ಈರುಳ್ಳಿ ದರ ಕುಸಿದಾಗ ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ್ದಾಗಿದೆ. ಈಗ ದರ ಕುಸಿತದಿಂದಾಗಿ ಸಾವಿರಾರು ಲೀಟರ್ ಗಳಷ್ಟು ಹಾಲನ್ನು ಕೂಡ ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಲಾಗಿದೆ.
ಮಹಾರಾಷ್ಟ್ರದಲ್ಲಿ ಹಾಲಿನ ದರ ಕುಸಿತ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ ಹತ್ತಿರ ಹಾಲು ಉತ್ಪಾದಕರಿಂದ ಪ್ರತಿಭಟನೆ ನಡೆದಿದೆ. ಕರ್ನಾಟಕದ ಹಾಲು ಖರೀದಿಸಲು ನಿರಾಕರಿಸಿದ್ದರಿಂದ ಪ್ರತಿಭಟನೆ ನಡೆಸಿದ ಹಾಲು ಉತ್ಪಾದಕರು, ಸಾವಿರಾರು ಲೀಟರ್ ಗಳಷ್ಟು ಹಾಲನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಹಾಲಿನ ದರ ಕುಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಹಾಲು ಖರೀದಿಗೆ ನಿರಾಕರಣೆ ಮಾಡಲಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ಹೊರವಲಯದಲ್ಲಿ ಇರುವ ಕೊಗನಳ್ಳಿ ಚೆಕ್ ಪೋಸ್ಟ್ ಬಳಿ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಸುರಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.