Publish Date: Tue, 05 May 2020 (14:58 IST)
Updated Date: Tue, 05 May 2020 (14:59 IST)
ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ.
ದುಬೈ, ಮಸ್ಕತ್ ನಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಇದೀಗ ವಿಡಿಯೋ ದಲ್ಲಿ ಸ್ವತಃ ಶೋಭಾ ಅವರೇ ತಿಳಿಸಿದ್ದಾರೆ.
ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್ ನಲ್ಲಿ ಹಲ್ಲೆ ಮಾಡಿದ್ದ ಘಟನೆಯ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ದಿನನಿತ್ಯ ನೂರಾರು ಬೆದರಿಕೆ ಕರೆಗಳು ಬರುತ್ತಿವೆ. ಜತೆಗೆ ಹಲವಾರು ಅಶ್ಲೀಲ ಕರೆಗಳು ಬರುತ್ತಿದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಜಿಹಾದಿಗಳು ಎರಡು ಮೂರು ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.
ಪೊಲೀಸರಿಗೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದ್ದೇವೆ. ಕರೆ ಮಾಡಿದ ಆರೋಪಿಗಳನ್ನು ಈವರೆಗೆ ಪೊಲೀಸರು ಪತ್ತೆ ಹಚ್ಚಿಲ್ಲ. ದೆಹಲಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.