Daily Horoscope
✕

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Webdunia
ಮಂಗಳವಾರ, 20 ಡಿಸೆಂಬರ್ 2022 (17:00 IST)
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಯಶೋಧಾ (70), ಮಗಳು ಸುಮನ್ (41), ಮಗ ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್​, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಆದ್ರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ. ಯಶೋಧರಿಗೆ ಸಂಬಂಧಿಕರು ಹಲವು ಬಾರಿ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಈ ಹಿನ್ನೆಲೆ ಸಂಬಂಧಿಕರು ರಾಜಾಜಿನಗರದಲ್ಲಿರುವ 2ನೇ ಮಗಳಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ನಂತರ ಮನೆ ಬಳಿ ಬಂದಾಗ ಚಪ್ಪಲಿ, ಕಾರ್ ಇರುವುದು ಪತ್ತೆಯಾಗಿದೆ. ಬಳಿಕ ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಕುಟುಂಬಸ್ಥರ ದೂರಿಗಾಗಿ ಕಾಯುತ್ತಿದ್ದಾರೆ. ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ
Show comments