ಬೆಂಗಳೂರು: ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಚಂಡಮಾರುತ ಆರ್ಭಟಿಸಲಿದ್ದು, ಇದರ ಪರಿಣಾಮ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಇದರ ನೇರ ಪರಿಣಾಮ ಉತ್ತರ ಕರ್ನಾಟಕ ಕ್ಕೆ ತಟ್ಟಲಿದೆ.
ರಾಜ್ಯದ ಕಲಬುರಗಿ, ಕೊಪ್ಪಳ, ಬಳ್ಳಾರಿ, ಗದಗ, ಯಾದಗಿರಿ, ರಾಯಚೂರು, ಬೀದರ್, ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಡಿ. 6ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ